
CM of Karnataka
@CMofKarnataka • 1,635,888 subscribers
Official Page of the Chief Minister's Office, Karnataka
Shorts
Videos

Karnataka is building India’s first Quantum City at Hesaraghatta, creating a world-class ecosystem for quantum research, innovation and entrepreneurship. With the Karnataka Quantum Mission, we are bringing together researchers, universities, startups and industry to position the state at the forefront of quantum technology. Quantum will shape the future of computing, communication, healthcare and advanced manufacturing, and Karnataka is ready to lead that future.
CM of Karnataka64,543 Aufrufe • vor 2 Tagen

ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್ ಯೋಜನೆಗೆ ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಬೃಹತ್ ಯೋಜನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ. ರೈತರ ಹಿತರಕ್ಷಣೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಹಿಂದಿನ ಸರ್ಕಾರ ಎಕರೆಗೆ ಕೇವಲ ₹25 ಲಕ್ಷ ನಿಗದಿಪಡಿಸಿದ್ದರೆ, ನಮ್ಮ ಸರ್ಕಾರ ಪ್ರತಿ ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ ನೀಡಲು ತೀರ್ಮಾನಿಸಿದೆ. ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ 50% ಅಭಿವೃದ್ಧಿಪಡಿಸಿದ ಜಾಗವನ್ನು ನೀಡಲಾಗುವುದು. ಈ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಯಾವುದೇ ಒತ್ತಾಯವಿರುವುದಿಲ್ಲ. ಯುವಜನತೆಗೆ ಅಪಾರ ಉದ್ಯೋಗಾವಕಾಶ ಸೃಷ್ಟಿಸಿ, ನಮ್ಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಸಹಕಾರವಿರಲಿ. - GBDA ಯೋಜನೆ ಕುರಿತು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರ ಸಂದೇಶ
CM of Karnataka60,709 Aufrufe • vor 2 Tagen

ಲೋಕಭವನದಲ್ಲಿಂದು ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದೃಶ್ಯಗಳು..
CM of Karnataka34,168 Aufrufe • vor 8 Tagen

ಒಳ ಮೀಸಲಾತಿ ಜಾರಿಯಾದ ಬೆನ್ನಲ್ಲೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72,186 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಶ್ರೀ DK Shivakumar ಅವರ ನೇತೃತ್ವದ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳೂ ಭರ್ತಿಯಾಗಲಿದೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ ಹಾಗೂ ತ್ವರಿತವಾಗಿ ನಡೆಸಲು ಕಾಲಮಿತಿಯನ್ನು ನಿಗದಿ ಪಡಿಸಲಾಗಿದೆ. ಇದರಂತೆ ಮುಂದಿನ 4 ತಿಂಗಳ ಒಳಗಾಗಿ ನೇಮಕಾತಿ ಪರೀಕ್ಷೆಗಳು ನಡೆಯಲಿವೆ. ಒಟ್ಟಾರೆ 6 ತಿಂಗಳ ಒಳಗಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿವೆ. ನಾಡಿನ ಉದ್ಯೋಗಾಕಾಂಕ್ಷಿಗಳು ಅಗತ್ಯ ತಯಾರಿ ನಡೆಸಿ, ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ. ನಿಮ್ಮಿಷ್ಟದ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಿ.
CM of Karnataka58,224 Aufrufe • vor 1 Monat

ಕಚೇರಿ ಅಲೆದಾಟ ತಪ್ಪಿತು; ಜಾತಿ, ನಿವಾಸಿ ಪ್ರಮಾಣಪತ್ರ ಮನೆ ಬಾಗಿಲಿಗೆ ಬಂತು! ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತವಾಗಿ ಜಾತಿ ಹಾಗೂ ಶಾಶ್ವತ ನಿವಾಸಿ ಪ್ರಮಾಣಪತ್ರ ವಿತರಿಸುವ ಸೇವೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು, ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರೊಂದಿಗೆ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿ, ಮಾತನಾಡಿದರು.
CM of Karnataka28,288 Aufrufe • vor 22 Tagen

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಅಪರಾಧ ತನಿಖಾ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಜಿಲ್ಲಾ ಪೊಲೀಸ್ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೋರೆನ್ಸಿಕ್ ವ್ಯಾನ್ಗಳು ಹಾಗೂ 75 ಹೊಸ ಬೊಲೆರೋ ವಾಹನಗಳನ್ನು ಹಸಿರು ನಿಶಾನೆ ತೋರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.
CM of Karnataka27,662 Aufrufe • vor 1 Monat

ರಾಜ್ಯದಲ್ಲಿ ಬರದ ಪರಿಸ್ಥಿತಿ ಇದೆ. ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಕುಡಿಯುವ ನೀರಿನ ಸಮರ್ಪಕ ಬಳಕೆಗೆ ಉತ್ತೇಜಿಸಿ ಹಾಗೂ ರೈತರಿಗೆ ಪರಿಸ್ಥಿತಿ ಮನದಟ್ಟು ಮಾಡಿಸುವಂತಹ ಕಾರ್ಯಗಳನ್ನು ಅಧಿಕಾರಿಗಳು ಮಾಡಬೇಕು. ಈ ಸಂದರ್ಭದಲ್ಲಿ ನಾವೆಲ್ಲರೂ "ಟೀಮ್ ಕರ್ನಾಟಕ"ವಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. - ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಜೊತೆ ನಡೆಸಿದ ವಿಡಿಯೋ ಸಂವಾದದ ತುಣುಕುಗಳು
CM of Karnataka13,608 Aufrufe • vor 21 Tagen

ತುಂಗಭದ್ರಾ ಜಲಾನಯನ ಪ್ರದೇಶದ ರೈತರು ಮತ್ತು ಆ ಭಾಗದ ಜನರಿಗೆ ಸಿಹಿಸುದ್ದಿಯೊಂದನ್ನು ತಲುಪಿಸುವ ಉದ್ದೇಶದಿಂದ ಈ ವೀಡಿಯೋವನ್ನು ಹಂಚಿಕೊಳ್ಳುತ್ತಿದ್ದೇನೆ. ಕಳೆದ ವರ್ಷ ತುಂಗಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿಹೋದ ವೇಳೆ ಕೇವಲ 6 ದಿನಗಳಲ್ಲಿ ಹೊಸ ಗೇಟ್ ಅಳವಡಿಸಿ, ಜಲಾಶಯದಿಂದ ನೀರು ಪೋಲಾಗದಂತೆ ತಡೆದು ರೈತರ ಹಿತ ಕಾಪಾಡಿದ್ದೆವು. ಅಂದೇ ಮತ್ತೆ ಇಂತಹ ಘಟನೆಗೆ ಅವಕಾಶ ನೀಡಬಾರದು ಎಂಬ ಸಂಕಲ್ಪಗೈದಿದ್ದ ನಾವು ಈಗ ಅಣೆಕಟ್ಟಿನ ಎಲ್ಲಾ 33 ಗೇಟುಗಳಿಗೆ ಹೊಸ ಗೇಟ್ ಅಳವಡಿಕೆ ಮಾಡಿದ್ದೇವೆ. ಜೂನ್ 25ನೇ ತಾರೀಖು ಕೇಂದ್ರ ಸಚಿವರಾದ ಶ್ರೀ ಸಿ.ಆರ್.ಪಾಟೀಲ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ ರೆಡ್ಡಿಯವರ ಜೊತೆಗೂಡಿ ಹೊಸ ಗೇಟ್‌ಗಳನ್ನು ಲೋಕಾರ್ಪಣೆಗೊಳಿಸುತ್ತಿದ್ದೇನೆ. ಲಕ್ಷಾಂತರ ರೈತರ ಜಮೀನುಗಳಿಗೆ ನೀರಿನ ಆಸರೆಯಾಗಿರುವ, ಕೋಟ್ಯಂತರ ಜೀವಗಳಿಗೆ ಜೀವಜಲವುಣಿಸುತ್ತಿರುವ ತುಂಗಭದ್ರಾ ಜಲಾಶಯ ನಮ್ಮವರಿಂದ ಬಂದ ಬಳುವಳಿ. ಅದನ್ನು ಸುಸ್ಥಿತಿಯಲ್ಲಿಟ್ಟು, ಮುಂದಿನ ತಲೆಮಾರುಗಳಿಗೂ ಅದರ ಲಾಭ ದಕ್ಕುವಂತೆ ಮಾಡುವುದು ನಮ್ಮ ಕರ್ತವ್ಯ. ನಾವಿದನ್ನು ಅತ್ಯಂತ ಶ್ರದ್ಧೆಯಿಂದ ಮಾಡಿದ್ದೇವೆ. ಈ ಯೋಜನೆಯೂ ನಿಮ್ಮದೇ, ಕಾರ್ಯಕ್ರಮವೂ ನಿಮ್ಮದೆ. ನಿಮ್ಮೆಲ್ಲರ ಶುಭ ಹಾರೈಕೆ ನಮ್ಮೊಂದಿಗಿರಲಿ. - ಮುಖ್ಯಮಂತ್ರಿ ಶ್ರೀ DK Shivakumar
CM of Karnataka19,854 Aufrufe • vor 1 Monat

ಮುಖ್ಯಮಂತ್ರಿ ಶ್ರೀ DK Shivakumar ಅವರ ಮುಂದಾಳತ್ವದಲ್ಲಿ ಬೆಂಗಳೂರು ನಗರದ ಚಿತ್ರಣ ಬದಲಾಗುತ್ತಿದೆ. ಸಂಚಾರ ದಟ್ಟಣೆ, ಟ್ರಾಫಿಕ್ ಸಿಗ್ನಲ್ ಗಳಿಂದ ಹೈರಾಣಾಗಿದ್ದ ವಾಹನ ಸವಾರರಿಗೆ ದಟ್ಟಣೆ ರಹಿತ, ಸಿಗ್ನಲ್ ಮುಕ್ತ ಸಂಚಾರಕ್ಕೆ ಹೊಸ ಮಾರ್ಗಗಳು ತೆರೆದುಕೊಳ್ಳುತ್ತಿವೆ. ನಗರದಲ್ಲಿ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ದಶಪಥ ರಸ್ತೆ ಲೋಕಾರ್ಪಣೆಗೊಂಡು ದಿನ ಕಳೆಯುವುದರೊಳಗೆ ಹೆಬ್ಬಾಳ ಫ್ಲೈ ಓವರ್ ನಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಬ್ಬಂದ ವಸತಿ ಗೃಹದ ವರೆಗೆ ಸಂಪರ್ಕ ಕಲ್ಪಿಸುವ ಮೂರು ಪಥಗಳ ಸುರಂಗ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಬೆಳೆಯುತ್ತಿರುವ ಬೆಂಗಳೂರು ನಗರದ ವೇಗಕ್ಕೆ ಅನುಗುಣವಾಗಿ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿ, ನಗರದ ನಿವಾಸಿಗಳಿಗೆ ಸುಗಮ ಸಂಚಾರ ಸೌಲಭ್ಯ ಕಲ್ಪಿಸಲು ಟೊಂಕಕಟ್ಟಿ ನಿಂತಿರುವ ರಾಜ್ಯ ಸರ್ಕಾರದ ನಿರ್ಧಾರಗಳು ಬೆಂಗಳೂರಿಗರಲ್ಲಿ ನೆಮ್ಮದಿ ಮೂಡಿಸಿದೆ.
CM of Karnataka13,441 Aufrufe • vor 1 Monat

ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅವಕಾಶ ಕೊಡಬಾರದು ಎಂದು ಪ್ರತಾಪ್ ಸಿಂಹ ಅವರು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ. ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು. ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸಮಾಜದ ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. - ಮುಖ್ಯಮಂತ್ರಿ Siddaramaiah
CM of Karnataka34,144 Aufrufe • vor 11 Monaten

ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥರಾದ ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿ ಅವರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣ ಪತ್ರ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಮೀಕ್ಷೆ ಕೇವಲ ಹಿಂದುಳಿದವರಿಗಲ್ಲಾ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಇನ್ಫೋಸಿಸ್ ಸಂಸ್ಥೆಯವರು ಅಂದರೆ ಅವರು ಬೃಹಸ್ಪತಿಗಳೇ? ಸರ್ಕಾರ ಮಾಡುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ ಎಂದು ಈಗಾಗಲೇ ಹೇಳಿದೆ. ಇದು ಎಲ್ಲಾ ಜನರನ್ನು ಒಳಗೊಂಡಂತೆ ಮಾಡುತ್ತಿರುವ ಸಮೀಕ್ಷೆ. ಶಕ್ತಿ ಯೋಜನೆಯಡಿ ಬಡವರು, ಮೇಲ್ಜಾತಿಯವರು ಎಲ್ಲರೂ ಬಳಸಿಕೊಳ್ಳುತ್ತಾರೆ. ಈ ಬಗ್ಗೆ ತಪ್ಪು ಮಾಹಿತಿ ಹೋಗಿದೆ. ಸರ್ಕಾರ ಈ ಬಗ್ಗೆ ಜಾಹೀರಾತು ನೀಡಿದೆ, ಸಚಿವರು ಹಾಗೂ ಮುಖ್ಯಮಂತ್ರಿಗಳ ಸಂದೇಶಗಳನ್ನು ಜನರಿಗೆ ತಲುಪಿಸಲಾಗಿದೆ. ಸಮೀಕ್ಷೆಯನ್ನು ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೂ ಜಾತಿಗಣತಿಯನ್ನು ಮಾಡುತ್ತದೆ, ಆಗಲೂ ಇವರು ಸಹಕರಿಸುವುದಿಲ್ಲವೇ? ಅವರಿಗಿರುವ ತಪ್ಪು ಮಾಹಿತಿಯಿಂದಾಗಿ ಈ ರೀತಿ ಅಸಹಕಾರ ತೋರುತ್ತಿರಬಹುದು. ರಾಜ್ಯದಲ್ಲಿ ಸುಮಾರು 7 ಕೋಟಿ ಜನಸಂಖ್ಯೆಯಿದ್ದು, ಈ ಜನರ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಾಗಿದೆ. - ಮುಖ್ಯಮಂತ್ರಿ Siddaramaiah
CM of Karnataka30,068 Aufrufe • vor 9 Monaten

ದೈಹಿಕ ಅಥವಾ ಮಾನಸಿಕ ನ್ಯೂನ್ಯತೆಯಿಂದ ಬಳಲುವ ಮಕ್ಕಳನ್ನು ತಾತ್ಸಾರ ದೃಷ್ಟಿಯಿಂದ ನೋಡದೆ, ಆ ನಿಷ್ಕಲ್ಮಶ ಜೀವಗಳಿಗೆ ಬೊಗಸೆಯಷ್ಟು ಪ್ರೀತಿ ನೀಡಿ ನೋಡಿ, ಮರಳಿ ಬೆಟ್ಟದಷ್ಟು ಪ್ರೀತಿ ತೋರುತ್ತಾರೆ. ಪ್ರತಿ ಮಗುವೂ ಪ್ರತಿಭಾಶಾಲಿಯೇ, ಅವರ ಪ್ರತಿಭೆಯನ್ನು ಗುರುತಿಸಿ, ಬೆಂಬಲಿಸುವ ಕೆಲಸ ನಮ್ಮದಾಗಬೇಕು. ವಿಶೇಷ ಚೇತನರನ್ನು ಸಮಾಜದ ಆಸ್ತಿಯಾಗಿ ಪರಿವರ್ತಿಸುವ ಹೊಣೆ ಮಕ್ಕಳ ಪೋಷಕರ ಜೊತೆಗೆ ನಮ್ಮೆಲ್ಲರದ್ದು. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಶ್ರಮಿಸೋಣ, ಮಕ್ಕಳ ಕನಸುಗಳಿಗೆ ಬಣ್ಣ ತುಂಬೋಣ. - ಮುಖ್ಯಮಂತ್ರಿ Siddaramaiah
CM of Karnataka47,830 Aufrufe • vor 1 Jahr