CM of Karnataka's banner
CM of Karnataka's profile picture

CM of Karnataka

@CMofKarnataka • 1,636,061 subscribers

Official Page of the Chief Minister's Office, Karnataka

Shorts

ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಅವರು ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮೆಷಿನ್ ಖರೀದಿಸಿ, ಪೂಜಿಸುತ್ತಿರುವ ವೀಡಿಯೋ ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿಸಿತು. ಸ್ತ್ರೀಸಬಲೀಕರಣದ ಆಶಯದೊಂದಿಗೆ ಜಾರಿಗೆ ಕೊಟ್ಟ ಗೃಹಲಕ್ಷ್ಮಿ ಯೋಜನೆಯು ಸ್ತ್ರೀಶಕ್ತಿಯನ್ನು ಆರಾಧಿಸುವ ನವರಾತ್ರಿಯಲ್ಲಿ ಮಹಿಳೆಯೊಬ್ಬರ ಸಂಭ್ರಮಕ್ಕೆ ಕಾರಣವಾಗಿರುವುದು ಹೆಚ್ಚು ಅರ್ಥಪೂರ್ಣ ಮತ್ತು ಸಾರ್ಥಕವೆನಿಸಿದೆ. ಇಂತಹ ಇನ್ನಷ್ಟು ಕುಟುಂಬಗಳ ಖುಷಿಗೆ ನಮ್ಮ ಯೋಜನೆ ಸಾಕ್ಷಿಯಾಗಲಿ ಎಂದು ಆಶಿಸುತ್ತೇನೆ. - ಮುಖ್ಯಮಂತ್ರಿ Siddaramaiah #Gruhalaxmi #GuaranteeScheme #KarnatakaGovernament

ರಾಮನಗರದ ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆ ಬಿ.ಕೆ.ತುಳಸಿ ಅವರು ಕಳೆದ ಏಳು ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ಮಹಾನವಮಿಯ ದಿನ ಹೊಸ ವಾಷಿಂಗ್ ಮೆಷಿನ್ ಖರೀದಿಸಿ, ಪೂಜಿಸುತ್ತಿರುವ ವೀಡಿಯೋ ನನ್ನ ಹಬ್ಬದ ಸಂಭ್ರಮವನ್ನು ಇಮ್ಮಡಿಯಾಗಿಸಿತು. ಸ್ತ್ರೀಸಬಲೀಕರಣದ ಆಶಯದೊಂದಿಗೆ ಜಾರಿಗೆ ಕೊಟ್ಟ ಗೃಹಲಕ್ಷ್ಮಿ ಯೋಜನೆಯು ಸ್ತ್ರೀಶಕ್ತಿಯನ್ನು ಆರಾಧಿಸುವ ನವರಾತ್ರಿಯಲ್ಲಿ ಮಹಿಳೆಯೊಬ್ಬರ ಸಂಭ್ರಮಕ್ಕೆ ಕಾರಣವಾಗಿರುವುದು ಹೆಚ್ಚು ಅರ್ಥಪೂರ್ಣ ಮತ್ತು ಸಾರ್ಥಕವೆನಿಸಿದೆ. ಇಂತಹ ಇನ್ನಷ್ಟು ಕುಟುಂಬಗಳ ಖುಷಿಗೆ ನಮ್ಮ ಯೋಜನೆ ಸಾಕ್ಷಿಯಾಗಲಿ ಎಂದು ಆಶಿಸುತ್ತೇನೆ. - ಮುಖ್ಯಮಂತ್ರಿ Siddaramaiah #Gruhalaxmi #GuaranteeScheme #KarnatakaGovernament

25,688 просмотров

Videos

CMofKarnataka's profile picture

ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಬೃಹತ್ ಯೋಜನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ. ರೈತರ ಹಿತರಕ್ಷಣೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಹಿಂದಿನ ಸರ್ಕಾರ ಎಕರೆಗೆ ಕೇವಲ ₹25 ಲಕ್ಷ ನಿಗದಿಪಡಿಸಿದ್ದರೆ, ನಮ್ಮ ಸರ್ಕಾರ ಪ್ರತಿ ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ ನೀಡಲು ತೀರ್ಮಾನಿಸಿದೆ. ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ 50% ಅಭಿವೃದ್ಧಿಪಡಿಸಿದ ಜಾಗವನ್ನು ನೀಡಲಾಗುವುದು. ಈ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಯಾವುದೇ ಒತ್ತಾಯವಿರುವುದಿಲ್ಲ. ಯುವಜನತೆಗೆ ಅಪಾರ ಉದ್ಯೋಗಾವಕಾಶ ಸೃಷ್ಟಿಸಿ, ನಮ್ಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಸಹಕಾರವಿರಲಿ. - GBDA ಯೋಜನೆ ಕುರಿತು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರ ಸಂದೇಶ

CM of Karnataka

63,340 просмотров • 1 месяц назад

CMofKarnataka's profile picture

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರೊಂದಿಗೆ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಅವರೆಲ್ಲರೂ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಲು ಅಗತ್ಯವಿರುವ ಎಲ್ಲಾ ರೀತಿಯ ನೆರವು ಒದಗಿಸುವುದಾಗಿ ಭರವಸೆ ನೀಡಿದರು. ನೇಪಾಳದಿಂದ ದೆಹಲಿಗೆ ತಲುಪುವ ಪ್ರತಿಯೊಬ್ಬ ಕನ್ನಡಿಗರಿಗೂ ಅಗತ್ಯ ವಸತಿ, ಊಟ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವಂತೆ ಹಾಗೂ ಅಲ್ಲಿಂದ ಅವರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ಅಗತ್ಯ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. Karnataka stands firmly with every Kannadiga! Chief Minister Shri DK Shivakumar spoke directly with Kannadigas stranded in Nepal and assured them that the State Government is doing everything possible to bring them home safely. He has directed officials to make arrangements for their accommodation and necessary support in Delhi, before they continue their journey to Karnataka. We will stand by our people and bring them home safely.

CM of Karnataka

22,495 просмотров • 27 дней назад

CMofKarnataka's profile picture

ಒಳ ಮೀಸಲಾತಿ ಜಾರಿಯಾದ ಬೆನ್ನಲ್ಲೇ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72,186 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಶ್ರೀ DK Shivakumar ಅವರ ನೇತೃತ್ವದ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳೂ ಭರ್ತಿಯಾಗಲಿದೆ. ಈ ಬೃಹತ್‌ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ ಹಾಗೂ ತ್ವರಿತವಾಗಿ ನಡೆಸಲು ಕಾಲಮಿತಿಯನ್ನು ನಿಗದಿ ಪಡಿಸಲಾಗಿದೆ. ಇದರಂತೆ ಮುಂದಿನ 4 ತಿಂಗಳ ಒಳಗಾಗಿ ನೇಮಕಾತಿ ಪರೀಕ್ಷೆಗಳು ನಡೆಯಲಿವೆ. ಒಟ್ಟಾರೆ 6 ತಿಂಗಳ ಒಳಗಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿವೆ. ನಾಡಿನ ಉದ್ಯೋಗಾಕಾಂಕ್ಷಿಗಳು ಅಗತ್ಯ ತಯಾರಿ ನಡೆಸಿ, ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ. ನಿಮ್ಮಿಷ್ಟದ ಉದ್ಯೋಗವನ್ನು ನಿಮ್ಮದಾಗಿಸಿಕೊಳ್ಳಿ.

CM of Karnataka

58,224 просмотров • 2 месяцев назад

CMofKarnataka's profile picture

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಜನಪರ ಆಡಳಿತಕ್ಕೆ ಹೊಸ ದಿಕ್ಕು ತೋರುತ್ತಾ, ಸರಕಾರ ಮತ್ತು ನಾಗರಿಕರ ನಡುವಿನ ಅಂತರವನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಜನಹಿತವನ್ನೇ ಉಸಿರಾಗಿಸಿಕೊಂಡು, ಸುವರ್ಣ ಯುಗ ಕಂಡ ಐತಿಹಾಸಿಕ ಸಾಮ್ರಾಜ್ಯದ ಹೆಮ್ಮೆಯ ನೆಲ, ಶ್ರೀಕೃಷ್ಣದೇವರಾಯನ ಆಡಳಿತ ವೈಭವ ಸಾರಿದ ಪುಣ್ಯಭೂಮಿ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರು ‘ಪ್ರಜಾಸೇವೆ’ ಇಲಾಖೆಗೆ ಚಾಲನೆ ನೀಡಲಿದ್ದಾರೆ. ಇಲ್ಲೇ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮ ಸ್ಮಾರಕವೂ ಇದ್ದು, ಬಾಪೂರವರ ನೆನಪು ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಯ ಸೇವೆ ಎಂಬ ಆದರ್ಶಗಳೇ ಸರ್ಕಾರದ ಈ ಜನಪರ ಕಾರ್ಯಕ್ಕೆ ದಾರಿದೀಪವಾಗಿವೆ. ಜನರ ಆಶೋತ್ತರಗಳನ್ನು ಅರಿತು, ಅವರ ಪ್ರತಿಯೊಂದು ಅಹವಾಲಿಗೂ ಸ್ಥಳದಲ್ಲೇ ಪರಿಹಾರ ಕಲ್ಪಿಸುವುದೇ ಸರ್ಕಾರದ ಅಚಲ ಸಂಕಲ್ಪ. ಬಾಗಿಲಿಗೆ ಬಂದಿದೆ ಸರಕಾರ, ಸೇವೆಗೆ ಇರಲಿ ನಿಮ್ಮ ಸಹಕಾರ. #PrajaSeve #NimmondigeNaavu

CM of Karnataka

13,475 просмотров • 21 дней назад