
Hariprasad.B.K.
@HariprasadBK2 • 14,201 subscribers
President Karnataka Pradesh Congress Committee.
Videos

RSS ಈ ದೇಶಕ್ಕೆ, ಸಮಾಜಕ್ಕೆ, ಸಂವಿಧಾನಕ್ಕೆ ಮಾತ್ರ ಮಾರಕವಲ್ಲ ಸ್ವತಃ ಬಿಜೆಪಿ ನಾಯಕರಿಗೂ ಮಾರಕವಾಗಿದೆ! ಈ ಸತ್ಯವನ್ನು ಹೇಳಿದ್ದು ಬಿಜೆಪಿಯವರೇ ಹೊರತು ನಾವಲ್ಲ. RSSನ ಸರ್ವಾಧಿಕಾರಿತನಕ್ಕೆ ಬಿಜೆಪಿಯ ಬಲಿಷ್ಠ ನಾಯಕರೂ ಬಲಿಯಾಗಿ ಬಿಲ ಸೇರಿದ್ದಾರೆ. RSS ಎಂಬ ವಿಷಜಂತು ಬಿಜೆಪಿಯವರನ್ನೂ ಸುಟ್ಟು ಬೂದಿ ಮಾಡಿದೆ. ಈಗ ಬಿಜೆಪಿಯವರು ಸ್ಪರ್ಧೆಗೆ ಬಿದ್ದವರಂತೆ RSS ಪರವಾಗಿ ಸಮರ್ಥನೆಗೆ ಇಳಿದು ನಮ್ಮನ್ನು ನಿಂದಿಸುತ್ತಿದ್ದಾರೆ. ಬಿಜೆಪಿಯವರ ಈ ಸಮರ್ಥನಾ ಅಭಿಯಾನ ನಡೆಯುತ್ತಿರುವುದು RSS ಮೇಲಿನ ಭಕ್ತಿಯಿಂದಲ್ಲ ಭಯದಿಂದ! RSSನ ಕಾಲಾಳುಗಳಂತೆ ವರ್ತಿಸದಿದ್ದರೆ ಬಿಜೆಪಿಯವರಿಗೆ ಭವಿಷ್ಯವೂ ಇಲ್ಲ, ಬದುಕೂ ಇಲ್ಲ. ಆಡ್ವಾಣಿಯವರನ್ನು ಮೂಲೆಗೆ ತಳ್ಳಿದ ಇದೇ ಆರ್ಎಸ್ಎಸ್ ಯಡಿಯೂರಪ್ಪನವರನ್ನೂ ನೆಮ್ಮದಿಯಾಗಿರಲು ಬಿಟ್ಟಿರಲಿಲ್ಲ, ಕೊನೆಗೂ ಎಳೆದು ಮೂಲೆಗೆ ಕೂರಿಸುವಲ್ಲಿ ಯಶಸ್ವಿಯಾಗಿತ್ತು. RSS ಗುಲಾಮಗಿರಿ ಮಾಡದಿದ್ದರೆ ತಮ್ಮ ಪೂಜ್ಯ ತಂದೆಯವರಿಗಾದ ಗತಿ ತಮಗೂ ಆಗಬಹುದೆಂಬ ಭಯ ವಿಜಯೇಂದ್ರರಿಗೆ ಇರಬಹುದೇನೋ. RSSನವರು ಕಡುಭ್ರಷ್ಟರು ಎಂಬ ಸತ್ಯವನ್ನು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಶಾಸಕ ಸುರೇಶ್ ಗೌಡರೇ ಹೇಳಿದ್ದಾರೆ, ಇದಕ್ಕೆ ಉತ್ತರ ಹೇಳುವ ಧೈರ್ಯ BJP Karnataka ನಾಯಕರಾದ Vijayendra Yediyurappa R. Ashoka ಅವರಿಗಿದೆಯೇ? ಸುರೇಶ್ ಗೌಡರ ಈ ಹೇಳಿಕೆ ಹೊರಬಂದ ನಂತರವೂ ಅವರ ವಿರುದ್ದ ಯಾವುದೇ ಕ್ರಮ ಜರುಗಿಸದೆ ಅವರಿಗೆ ಟಿಕೆಟ್ ನೀಡಿ ಅವಕಾಶ ಕಲ್ಪಿಸಲಾಗಿತ್ತು ಅಂದರೆ ಏನರ್ಥ? ಅವರಿಂದ RSS ಬಗೆಗಿನ ಇನ್ನಷ್ಟು ನಿಗೂಢ ಸತ್ಯಗಳು ಹೊರಬರದಿರಲಿ ಎಂಬ ಉದ್ದೇಶದಿಂದ ಅಲ್ಲವೇ? ಯಡಿಯೂರಪ್ಪನವರು ಕಾಲಕಾಲಕ್ಕೆ RSS ಗೆ ದುಬಾರಿ ಕಾಣಿಕೆ ನೀಡುತ್ತಾ ಕೇಶವ ಕೃಪೆಗೆ ಪಾತ್ರರಾಗಿ ತಮ್ಮ ಅಸ್ತಿತ್ವ ಕಾಪಾಡಿಕೊಳ್ಳುತ್ತಾ ಬಂದಿದ್ದರೇ? ಯಡಿಯೂರಪ್ಪನವರು ಹಾಗೂ ಸಂಘದವರು ಸೇರಿ ಭ್ರಷ್ಟಾಚಾರದ ಸಹಪಂಕ್ತಿ ಭೋಜನ ಮಾಡಿದ್ದಾರೆಯೇ? ನೋಂದಣಿಯಾಗದ ಸಂಘವು ತನ್ನ ಇತರ ಅಂಗಸಂಸ್ಥೆಗಳ ಮೂಲಕ ವಸೂಲಿ ದಂಧೆ ನಡೆಸುತ್ತದೆಯೇ? ಯಡಿಯೂರಪ್ಪನವರಂತೆ ಇನ್ನೆಷ್ಟು ಜನ ಸಂಘಕ್ಕೆ ಅಕ್ರಮ ಹಣದ ಕಾಣಿಕೆ ಸಲ್ಲಿಸಿದ್ದಾರೆ? ಈ ಹಣ ಹವಾಲ ಮೂಲಕ ತಲುಪುತ್ತದೆಯೇ ಅಥವಾ RTGS ಮೂಲಕ ತಲುಪುತ್ತದೆಯೇ? ಸಂಘಪರಿವಾರಕ್ಕೆ ಎಷ್ಟು ಭೂಮಿಯನ್ನು ಅಕ್ರಮದ ಮೂಲಕ ದಯಪಾಲಿಸಲಾಗಿದೆ? RSS ನ ಈ ಎಲ್ಲಾ ವ್ಯವಹಾರಗಳು ನಿಗೂಢವಾಗಿಯೂ, ರಹಸ್ಯವಾಗಿಯೂ ಇರುವುದೇಕೆ? ಐಟಿ, ಇಡಿ, ಸಿಬಿಐಗಳು ಈ ಅಕ್ರಮ, ಅವ್ಯವಹಾರಗಳತ್ತ ಗಮನಿಸುವುದಿಲ್ಲವೇ? ಅವುಗಳೂ ಸಂಘದ ಶಾಖೆಗಳಂತಾಗಿರುವಾಗ ಇದನ್ನು ನಿರೀಕ್ಷಿಸುವುದು ಮೂರ್ಖತನವೇ ಸರಿ. ಬಿಜೆಪಿಯ ಭ್ರಷ್ಟಾಚಾರದ ಹಣ ಸಂಘದ ಸೇವೆಗೆ ಸಲ್ಲಿಕೆಯಾಗಿರುವ ಇನ್ನೆಷ್ಟು ಪ್ರಕರಣಗಳಿವೆ ಎಂಬ ಸತ್ಯವನ್ನು ಬಯಲಿಗಿಡಬೇಕಿದೆ, ಎಷ್ಟೆಷ್ಟು ಸರ್ಕಾರದ ಹಣ "ಸಂಘ ಸಮರ್ಪಣಮಸ್ತು" ಆಗಿದೆ ಎಂಬುದನ್ನು ತಿಳಿಯಬೇಕಿದೆ, ಬಿಜೆಪಿ ಹಾಗೂ ಸಂಘದ ನಡುವಿನ ಅಕ್ರಮ ಹಾಗೂ ಅನೈತಿಕ ವ್ಯವಹಾರಗಳನ್ನು ಹೊರಗೆಳೆಯಬೇಕಿದೆ.
Hariprasad.B.K.123,805 次观看 • 9 个月前

Despite 4 votes being declared invalid and 5 cross-votes, the Congress has emerged victorious in the #Haryana Rajya Sabha election. This victory reflects the strength of our organisation & the faith legislators have in the Congress ideology. Let it be clear: indiscipline and cross-voting will not be tolerated. Strict action will be taken against those who betrayed the party mandate. Accountability is non-negotiable.
Hariprasad.B.K.32,769 次观看 • 4 个月前

7 ವರ್ಷದ ಬಾಲಕಿ ಮೇಲೆ ಶಾಸಕನ ತಮ್ಮನಿಂದ ಅತ್ಯಾಚಾರ ಆದರೂ, ಆತನ ಪರವಾಗಿ ವಾದ ಮಾಡುತ್ತಾ, ಕೋರ್ಟ್ನಲ್ಲಿ ಕಣ್ಣೀರು, ಕರುಣೆಗಿಂತಲೂ ಮುಖ್ಯವಾಗಿ ಬೇಕಿರುವುದು ಸಾಕ್ಷಿಗಳು ಎಂದು ‘ಯುದ್ಧಕಾಂಡ’ ಸಿನಿಮಾದಲ್ಲಿ ಡೈಲಾಗ್ ಹೊಡೆಯುವ ಪ್ರಕಾಶ್ ಬೆಳವಾಡಿಯವರಿಗೆ ನಿಜ ಜೀವನದಲ್ಲಿ ಮಾತಾಡುವಾಗ ಸಾಕ್ಷಿ, ದಾಖಲೆಗಳಿಲ್ಲದೆ ಪುಂಗುವುದನ್ನು ರೂಡಿ ಮಾಡಿಕೊಂಡಂತಿದೆ. "ಮೋದಿಯ ಚಮಚಾಗಿರಿ ಮಾಡುತ್ತೇನೆ" ಎಂದು ಬಹಿರಂಗವಾಗಿಯೇ ಘೋಷಿಸಿಕೊಂಡಿರುವ ಬೆಳವಾಡಿ, ಕನಿಷ್ಟಪಕ್ಷ ಮೋದಿ ಗುಜರಾತಿನಲ್ಲಿ ಶಾಸಕರಾಗಿ ಮುಖ್ಯಮಂತ್ರಿಯಾದರೋ, ಇಲ್ಲ ಮುಖ್ಯಮಂತ್ರಿಯಾದ ನಂತರ ಶಾಸಕರಾದರೋ ಎಂಬ ಕನಿಷ್ಟ ಇತಿಹಾಸವೂ ಗೊತ್ತಿಲ್ಲದೇ ಇರುವುದು ದುರಂತ. ಸಂವಿಧಾನದಲ್ಲಿ ಪ್ರಧಾನಿಗಳ ಆಯ್ಕೆ,ಅಧಿಕಾರ, ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ವಿಧಿಗಳಿವೆ ಅದರ ಬಗ್ಗೆ ಎಳ್ಳಷ್ಟು ಬೆಳವಾಡಿಗೆ ತಿಳುವಳಿಕೆ ಇಲ್ಲ, ಜ್ಞಾನವಂತೂ ಇಲ್ಲವೇ ಇಲ್ಲ. ಭಾರತದ ಪ್ರಜೆ, ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಸದಸ್ಯರಾಗಿದ್ದರೆ ದೇಶದ ಪ್ರಧಾನಿಯಾಗಲು ಅರ್ಹತೆ ಹೊಂದಿರುತ್ತಾರೆ. ಆದರೆ ನಿಮ್ಮಂತೆ ದವಾಳಿಯಂತೂ ಆಗಿರಬಾರದು. ಸಂವಿಧಾನದ ಪ್ರಖಂಡ ಪಂಡಿತರಂತೆ, ಕಾನೂನು ತಜ್ಞರಂತೆ ಸಂವಿಧಾನದ ವಿಧಿ, ವಿಧಾನಗಳು ಹಾಗೂ ಕಾನೂನು ಗಳ ಬಗ್ಗೆ ವಾಚಾಮಗೋಚರ ಹಲುಬಿರುವ ಬೆಳವಾಡಿಗೆ ದೇಶದ ಮೂಲೆಯ ಯಾವ ಪ್ರಜೆಯಾದರೂ ಪ್ರಧಾನಿಯಾಗುವ ಹಕ್ಕು,ಅಧಿಕಾರ, ಅರ್ಹತೆ ಸಂವಿಧಾನವೇ ನೀಡಿದೆ ಎಂಬುದು ಗೊತ್ತಿಲ್ಲದೆ ಇರುವುದು ವಿಪರ್ಯಾಸ. ರಾಜ್ಯಸಭೆಯ ಸದಸ್ಯರಾದವರು ಪ್ರಧಾನಿಯಾಗಬಾರದೆಂದು ಯಾವ ಸಂವಿಧಾನ, ಕಾನೂನಿನಲ್ಲಿದೆ ಎಂದು ಬೆಳವಾಡಿ ಜನರಿಗೆ ತಿಳಿಸಲಿ. ಜಗತ್ತು ಕಂಡ ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ಅವರು ಅಸ್ಸಾಂ ರಾಜ್ಯದಿಂದ ರಾಜ್ಯಸಭೆಗೆ ಸದಸ್ಯರಾಗಿ ಪ್ರಧಾನಿಯಾದದ್ದು ಯಾವ ಅಪರಾಧ? ಅಸ್ಸಾಂ ದೇಶದಲ್ಲಿರುವ ರಾಜ್ಯವಲ್ಲವೇ? ಕರ್ನಾಟಕದಿಂದಲೇ ಪ್ರಧಾನಿಯಾದ ಹೆಚ್ ಡಿ ದೇವೇಗೌಡರು ಕೂಡ ರಾಜ್ಯಸಭೆಯ ಸದಸ್ಯರಾಗಿಯೇ ಎನ್ನುವುದು ಬಹಿರಂಗ ಸತ್ಯವಲ್ಲವೇ? ಖ್ಯಾತ ಪತ್ರಕರ್ತರಾದ ಕುಲದೀಪ್ ನಯ್ಯರ್ ಅವರು ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ ದೇಶದ ಪ್ರಜೆಯಾದವರು ಯಾವ ರಾಜ್ಯದಿಂದಲೂ ರಾಜ್ಯಸಭೆ ಸದಸ್ಯರಾಗಲು ಅರ್ಹರು ಎಂದು ದಾವೆ ಹೂಡಿದ ನಂತರ ಸುಪ್ರೀಂಕೋರ್ಟ್ ಕೂಡ ಅದಕ್ಕೆ ಅವಕಾಶ ನೀಡಿದೆ. ಇದು "ಪ್ರಖಂಡ ಪಂಡಿತ" ಬೆಳವಾಡಿಗೆ ತಿಳಿದಿದೆಯೇ? ಸಂವಿಧಾನ, ಕಾನೂನಿನ ಬಗ್ಗೆ ಮಾತಾಡುವಾಗ ಎಚ್ಚರ ಇರಲಿ.
Hariprasad.B.K.16,852 次观看 • 1 年前

ಪೇಜಾವರ ಶ್ರೀಗಳು ಜಾತ್ಯಾತೀತತೆ ಬಗ್ಗೆ ಮಾತಾಡುವುದು "ಭೂತದ ಬಾಯಲ್ಲಿ ಭಗವದ್ಗೀತೆ" ಕೇಳಿದಂತಿದೆ. ಜಾತಿ ಗಣತಿಯನ್ನು ವಿರೋಧಿಸುವ ಪೇಜಾವರ ಶ್ರಿಗಳು, ತಮ್ಮ ಮಠದಲ್ಲಿನ ಶ್ರೇಣೀಕೃತ ಜಾತಿ ಆಚರಣೆಯ ಬಗ್ಗೆ ಮೊದಲು ಮಾತಾಡಲಿ. ಅನಿಷ್ಠ ಪಂಕ್ತಿ ಭೇದ, ಮಡೆಸ್ನಾನವನ್ನು ಪೋಷಿಸಿ,ಕಾವಿ ಬಟ್ಟೆ ಹಾಕಿಕೊಂಡು ಪುಡಿ ರಾಜಕಾರಣಿಯಂತೆ ಮಾತಾಡುವುದನ್ನು ಬಿಡಲಿ.
Hariprasad.B.K.23,437 次观看 • 1 年前
没有更多内容可加载