
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA
@KEA_karnataka • 56,952 subscribers
Shraddha hi paramagathihi🙏🇮🇳
Videos

#KeaRecruitmentExam: ಕಲ್ಯಾಣ ಕರ್ನಾಟಕ ವೃಂದದ ಭೂಮಾಪಕ, ಗ್ರಾಮ ಆಡಳಿತಾಧಿಕಾರಿ ಮತ್ತು ವಸತಿ ಶಾಲೆಗಳ ಶಿಕ್ಷಕರ ಹುದ್ದೆಗಳಿಗೆ ಅ.24 ಮತ್ತು 25 ಹಾಗೂ ಉಳಿಕೆ ಮೂಲ ವೃಂದದ ಇಎಸ್ಐ- ನರ್ಸಿಂಗ್ ಅಧಿಕಾರಿ, ಫಾರ್ಮಸಿ ಅಧಿಕಾರಿ ಸೇರಿದಂತೆ ಇತರ ಹುದ್ದೆಗಳ ಪರೀಕ್ಷೆಗಳನ್ನು ಅ.26 ಮತ್ತು 27ರಂದು ನಡೆಸಲು #KEA ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷಾ ಮುನ್ನಾ ದಿನವಾದ ಶುಕ್ರವಾರ #KEA ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಮತ್ತು ಪರೀಕ್ಷಾ ನಿಯಂತ್ರಕಿ ಅರ್ಚನಾ ಅವರು ಎಲ್ಲ ಸಂಬಂಧಪಟ್ಟ ಜಿಲ್ಲೆಗಳ ಹೆಚ್ಚುವರಿ ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿ ಪರೀಕ್ಷಾ ಸಿದ್ಧತೆಗಳನ್ನು ಪರಿಶೀಲಿಸಿದರು. ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆ ನಡೆಸಲು ಸೂಚನೆ ನೀಡಿದರು. CM of Karnataka basavaraj rayareddi
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA27,348 次观看 • 21 天前

#KEA Recruitment: ನಗರ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (CAR/ DAR ) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ #KEA ಇಂದು ಅತ್ಯಂತ ಯಶಸ್ವಿಯಾಗಿ ಲಿಖಿತ ಪರೀಕ್ಷೆ ನಡೆಸಿತು. ಮಿಕ್ಕುಳಿದ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ 1,42,220 ಮಂದಿ ಪೈಕಿ 1,14,079 ( ಶೇ 80) ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಕಲ್ಯಾಣ ಕರ್ನಾಟಕದ ಒಟ್ಟು 32,191 ಅಭ್ಯರ್ಥಿಗಳ ಪೈಕಿ 28,849 (ಶೇ 90) ಮಂದಿ ಹಾಜರಾಗಿದ್ದರು. ಬೆಳಗಿನ ಅವಧಿಯ 309 ಹಾಗೂ ಮಧ್ಯಾಹ್ನದ 60 ಕೇಂದ್ರಗಳಲ್ಲಿ ಯಾವುದೇ ಗೊಂದಲ ಇಲ್ಲದೆ ಪರೀಕ್ಷೆ ನಡೆಯಿತು. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿತ್ತು. ಬೆಂಗಳೂರಿನ #KEA ಕಚೇರಿಯಲ್ಲಿ ಸ್ಥಾಪಿಸಿದ್ದ ಕಮಾಂಡ್ ಸೆಂಟರ್ ನಿಂದಲೇ ಎಲ್ಲ ಪರೀಕ್ಷಾ ಕೇಂದ್ರಗಳ ಮೇಲೆ ವೆಬ್ ಕಾಸ್ಟಿಂಗ್ ಮೂಲಕ ನಿಗಾ ಇಡುವ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷೆ ಮುಗಿದ ನಂತರ ಕೆಇಎ ತಲುಪಿದ #OMR ಉತ್ತರ ಪತ್ರಿಕೆಗಳನ್ನು ತಕ್ಷಣವೇ ಸ್ಕ್ಯಾನ್ ಮಾಡಿ ವೆಬ್ ಸೈಟ್ ಗೆ ಅಪ್ ಲೋಡ್ ಮಾಡುವ ಕೆಲಸ ಕೂಡ ಮಾಡಲಾಗುತ್ತಿದೆ. ಇದೊಂದು ಪಾರದರ್ಶಕ ಕ್ರಮವಾಗಿದ್ದು, ಯಾರು ಬೇಕಾದರೂ OMR ಪ್ರತಿಗಳನ್ನು ನೋಡಬಹುದು. - ಹೆಚ್.ಪ್ರಸನ್ನ ಐಎಎಸ್ ಕಾರ್ಯನಿರ್ವಾಹಕ ನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ CM of Karnataka basavaraj rayareddi Dr. Sharan Prakash Patil
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA71,683 次观看 • 2 个月前

#KeaRecruitmentExam: ಉಳಿಕೆ ಮೂಲ ವೃಂದದ ಒಟ್ಟು 505 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಇಂದು ಸುಸೂತ್ರವಾಗಿ ಲಿಖಿತ ಪರೀಕ್ಷೆ ನಡೆಯಿತು ಒಟ್ಟು 4,11,656 ಅಭ್ಯರ್ಥಿಗಳ ಪೈಕಿ ಬೆಳಗಿನ ಸಾಮಾನ್ಯ ಜ್ಞಾನ ಪತ್ರಿಕೆಯನ್ನು 3,04,096 (ಶೇ 74ರಷ್ಟು) ಮಂದಿ ಬರೆದರು. ಮಧ್ಯಾಹ್ಮದ ನಿರ್ದಿಷ್ಟ ಪತ್ರಿಕೆಯನ್ನು 3,03,058 ಮಂದಿ ಬರೆದಿದ್ದಾರೆ. ರಾಜ್ಯದ ಒಟ್ಟು 1,037 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಧಾರವಾಡದಲ್ಲಿ ಅತಿ ಹೆಚ್ಚು ಅಂದರೆ 60 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ವೆಬ್ ಕಾಸ್ಟಿಂಗ್ ಮೂಲಕ ಎಲ್ಲೆಡೆ ಬಿಗಿ ನಿಗಾ ವ್ಯವಸ್ಥೆ ಮಾಡಲಾಗಿತ್ತು. ಲಿಖಿತ ಪರೀಕ್ಷೆ ಮುಗಿದು, ಒಎಂಆರ್ ಉತ್ತರ ಪತ್ರಿಕೆಗಳು ತಲುಪಿದ ಕ್ಷಣದಿಂದಲೇ ಅವುಗಳನ್ನು ಸ್ಕ್ಯಾನ್ ಮಾಡಿ ಕೆಇಎ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡುವ ಕೆಲಸ ಆರಂಭಿಸಲಾಗಿದೆ. ಬೆಂಗಳೂರು, ಕಲ್ಬುರ್ಗಿ, ರಾಯಚೂರು, ಧಾರವಾಡ, ಬಳ್ಳಾರಿ, ವಿಜಯಪುರ, ದಾವಣಗೆರೆ ಮತ್ತು ಮೈಸೂರಿನಲ್ಲಿ ಸ್ಕ್ಯಾನಿಂಗ್ ಕೇಂದ್ರಗಳನ್ನು ತೆರೆದಿದ್ದು, ಸ್ಥಳೀಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸ್ಕ್ಯಾನಿಂಗ್ ನಡೆಯುತ್ತಿದೆ. ನಾಳೆ ಸಂಜೆ ವೇಳೆಗೆ ಎಲ್ಲ ಅಭ್ಯರ್ಥಿಗಳ ಒಎಂಆರ್ ಪ್ರತಿಗಳು ಕೆಇಎ ವೆಬ್ ಸೈಟ್ ನಲ್ಲಿ ಲಭ್ಯ ಇರಲಿವೆ. -ಹೆಚ್.ಪ್ರಸನ್ನ ಐಎಎಸ್ ಕಾರ್ಯನಿರ್ವಾಹಕ ನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ CM of Karnataka basavaraj rayareddi Dr. Sharan Prakash Patil
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA42,684 次观看 • 1 个月前

#KeaRecruitmentExam: ಕಲ್ಯಾಣ ಕರ್ನಾಟಕ ವೃಂದದ ಭೂಮಾಪಕ, ಗ್ರಾಮ ಆಡಳಿತಾಧಿಕಾರಿ ಮತ್ತು ವಸತಿ ಶಾಲೆಗಳ ಶಿಕ್ಷಕರ ಹುದ್ದೆಗಳಿಗೆ ಇಂದು ಲಿಖಿತ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ಬೆಳಗಿನ ಪರೀಕ್ಷೆಗೆ ಒಟ್ಟು 90,584 ಅಭ್ಯರ್ಥಿಗಳ ಪೈಕಿ ಶೇ 69ರಷ್ಟು ಮಂದಿ ಹಾಜರಾಗಿದ್ದರು. ಮಧ್ಯಾಹ್ನದ ನಂತರದ ಪರೀಕ್ಷೆಗೆ 85,737 ಅಭ್ಯರ್ಥಿಗಳ ಪೈಕಿ ಶೇ 69 ರಷ್ಟು ಮಂದಿ ಹಾಜರಾಗಿದ್ದರು. - ಹೆಚ್.ಪ್ರಸನ್ನ ಐಎಎಸ್ ಕಾರ್ಯನಿರ್ವಾಹಕ ನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ CM of Karnataka basavaraj rayareddi Dr. Sharan Prakash Patil
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA20,369 次观看 • 19 天前

#KSET-2026: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆ ಇಂದು ಯಶಸ್ವಿಯಾಗಿ ನಡೆಯಿತು. ಒಟ್ಟು 37 ವಿವಿಧ ವಿಷಯಗಳಿಗೆ ನಡೆದ ಕೆ-ಸೆಟ್ ಗೆ ಅರ್ಜಿ ಸಲ್ಲಿಸಿದ್ದ 1,29,212 ಮಂದಿ ಪೈಕಿ 1,17,017 (ಶೇ 91ರಷ್ಟು) ಮಂದಿ ಪರೀಕ್ಷೆ ಗೆ ಹಾಜರಾಗಿದ್ದರು. 11 ಜಿಲ್ಲೆಗಳ 326 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. #KEA ಕಚೇರಿಯಲ್ಲಿ ಸ್ಥಾಪಿಸಿದ್ದ ಕಮಾಂಡ್ ಸೆಂಟರ್ ಮೂಲಕ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. #KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ, ಪರೀಕ್ಷಾ ನಿಯಂತ್ರಕಿ ಅರ್ಚನಾ ಅವರು ಖುದ್ದು ಕಮಾಂಡ್ ಸೆಂಟರ್ ನಲ್ಲಿ ಇದ್ದು ಪರೀಕ್ಷಾ ಮೇಲ್ವಿಚಾರಣೆ ನಡೆಸಿದರು. CM of Karnataka basavaraj rayareddi Dr. Sharan Prakash Patil
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA26,211 次观看 • 1 个月前

#KeaRecruitment: ಭೂಮಾಪಕರ ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಕ್ರಮವಾಗಿ ಅ.2 ಮತ್ತು 4ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಇದರ ಪೂರ್ವ ತಯಾರಿ ಕುರಿತು #KEA ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಮತ್ತು ಪರೀಕ್ಷಾ ನಿಯಂತ್ರಕಿ ಅರ್ಚನಾ ಅವರು ಎಲ್ಲ ಜಿಲ್ಲೆಗಳ ಹೆಚ್ಚುವರಿ ಜಿಲ್ಲಾಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿದರು. ಭೂಮಾಪಕರ ಹುದ್ದೆಗೆ 92,701 ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ 4,11,656 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಏನೆಲ್ಲ ಮುಂಜಾಗ್ರತೆ ವಹಿಸಬೇಕು ಎಂಬುದರ ಬಗ್ಗೆ ಇಬ್ಬರೂ ಅಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ವಿವರಿಸಿ ಹೇಳಿದರು. ಅಕ್ರಮ ಹಾಗೂ ಗೊಂದಲಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆ ನಡೆಸಬೇಕು ಎನ್ನುವುದರ ಬಗ್ಗೆಯೂ ಮಾಹಿತಿ ನೀಡಿದರು. CM of Karnataka basavaraj rayareddi Dr. Sharan Prakash Patil
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA32,667 次观看 • 1 个月前

#CivilPoliceRecruitment: ಆಗಸ್ಟ್ 2 ರಂದು ನಡೆಯುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಗಳ ನೇಮಕಾತಿ ಪರೀಕ್ಷೆಯ ಪೂರ್ವ ತಯಾರಿಯ ಭಾಗವಾಗಿ #KEA ವತಿಯಿಂದ ಇಂದು ಬೆಂಗಳೂರು ನಗರದ ಪರೀಕ್ಷಾ ಕೇಂದ್ರಗಳ ಮುಖ್ಯ ಮೇಲ್ವಿಚಾರಕರ ಸಭೆ ನಡೆಸಿ, ತರಬೇತಿ ನೀಡಲಾಯಿತು. #KEA ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಪ್ರಾತ್ಯಕ್ಷಿಕೆ ಮೂಲಕ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕಟ್ಟುನಿಟ್ಟಿನ ನಿಗಾ ವಹಿಸುವ ಹಾಗೂ ಅಧಿಕಾರಿಗಳ ಜವಾಬ್ದಾರಿ ಬಗ್ಗೆಯೂ ವಿವರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ ನಾಯಕ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಫಾಲಾಕ್ಷ ಮತ್ತು ಮನೋಜ್ ಸೇರಿದಂತೆ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಪೊಲೀಸ್ ಅಧಿಕಾರಿಗಳೂ ಇಂದಿನ ಸಭೆಯಲ್ಲಿ ಭಾಗವಹಿಸಿದ್ದರು. CM of Karnataka Dr. Sharan Prakash Patil
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA60,887 次观看 • 3 个月前

#CivilPoliceRecruitment: ಆಗಸ್ಟ್ 2ರಂದು ನಡೆಯುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗೆ ಕೊನೆ ಕ್ಷಣದ ತಯಾರಿಯನ್ನು #KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಶನಿವಾರ ರಾತ್ರಿ ಪರಿಶೀಲಿಸಿದರು. #KEA ಕಚೇರಿಯಲ್ಲಿ ಬೃಹತ್ ಕಮಾಂಡ್ ಸೆಂಟರ್ ಸ್ಥಾಪಿಸಿದ್ದು, ಅದರ ಕಾರ್ಯನಿರ್ವಹಣೆಯನ್ನು ಅವರು ವೀಕ್ಷಿಸಿದರು. #KEA ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರೂ ಈ ಸಂದರ್ಭದಲ್ಲಿ ಇದ್ದರು. CM of Karnataka Dr. Sharan Prakash Patil
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA50,066 次观看 • 3 个月前

#KeaRecruitmentExam: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (#KSRP) ಪಡೆಯ ಕಾನ್ಸ್ಟೇಬಲ್ ಹುದ್ದೆಗೆ ಇಂದು ಯಶಸ್ವಿಯಾಗಿ ಪರೀಕ್ಷೆ ನಡೆಯಿತು. ಒಟ್ಟು 2,314 ಹುದ್ದೆಗಳಿಗೆ ಪರೀಕ್ಷೆ ನಡೆಯಿತು. ಮಿಕ್ಕುಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದಗಳಿಗೆ ಪರೀಕ್ಷೆ ನಡೆಯಿತು. ಮಿಕ್ಕುಳಿಕೆ ವೃಂದದ ಒಟ್ಟು 1,42,912 ಅಭ್ಯರ್ಥಿಗಳ ಪೈಕಿ 1,12,125 (ಶೇ 78) ಹಾಗೂ ಕಲ್ಯಾಣ ಕರ್ನಾಟಕ ವೃಂದದ 38,332 ಅಭ್ಯರ್ಥಿಗಳ ಪೈಕಿ 32,694 (ಶೇ 85) ಮಂದಿ ಪರೀಕ್ಷೆ ಗೆ ಹಾಜರಾಗಿದ್ದರು. ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ಇಡಲು #KEA ಕಚೇರಿಯಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿತ್ತು. #KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ , ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕಮಾಂಡ್ ಸೆಂಟರ್ ನಲ್ಲಿ ಇದ್ದು ಖುದು ಪರಿಶೀಲನೆ ನಡೆಸಿದರು. CM of Karnataka basavaraj rayareddi Dr. Sharan Prakash Patil DGP KARNATAKA
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA27,430 次观看 • 1 个月前

#KeaRecruitmentExam ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳ ನೇಮಕಕ್ಕೆ ಇಂದು ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಯಿತು. ಉಳಿಕೆ ಮೂಲ ವೃಂದದ ಸಹಾಯಕ ತೋಟಗಾರಿಕೆ ನಿರ್ದೇಶಕರು ಮತ್ತು ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳ ಸಾಮಾನ್ಯ ಜ್ಞಾನ- ಪತ್ರಿಕೆ- 1ರ ಪರೀಕ್ಷೆ ನಡೆಯಿತು. ಒಟ್ಟು 4,487 ಅಭ್ಯರ್ಥಿಗಳ ಪೈಕಿ 3,679 ( 82%) ಮಂದಿ ಪರೀಕ್ಷೆಗೆ ಹಾಜರಾಗಿದ್ದರು. #KEA ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಹಾಗೂ ಪರೀಕ್ಷಾ ನಿಯಂತ್ರಕಿ ಅರ್ಚನಾ ಅವರು ಕಮಾಂಡ್ ಸೆಂಟರ್ ನಲ್ಲಿ ಖುದ್ದು ಇದ್ದು ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷಾ ಮೇಲ್ವಿಚಾರಣೆ ನಡೆಸಿದರು. ಸೆ.30ರಂದು ಉಳಿಕೆ ಮೂಲ ವೃಂದದ ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗಳ ನಿರ್ದಿಷ್ಟ ಪತ್ರಿಕೆ- ಪತ್ರಿಕೆ- 2ರ ಪರೀಕ್ಷೆ ನಡೆಯಲಿದೆ. - ಹೆಚ್.ಪ್ರಸನ್ನ ಐಎಎಸ್ ಕಾರ್ಯನಿರ್ವಾಹಕ ನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ CM of Karnataka Dr. Sharan Prakash Patil basavaraj rayareddi
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA22,423 次观看 • 1 个月前

#KEA Recruitment: ಮುಂಬರುವ ನೇಮಕಾತಿ ಪರೀಕ್ಷೆಗಳನ್ನು ಮತ್ತಷ್ಟು ನ್ಯಾಯಸಮ್ಮತ ಮತ್ತು ಪರಿಣಾಮಕಾರಿಯಾಗಿ ನಡೆಸಲು #KEA ಸಿದ್ಧತೆ ನಡೆಸಿದೆ. ಇದರ ಒಂದು ಭಾಗವೇ ಜಿಲ್ಲಾ ಪರೀಕ್ಷಾ ಮಾಸ್ಟರ್ ತರಬೇತುದಾರರ ಕಾರ್ಯಾಗಾರ. #KEA ಕಚೇರಿಯಲ್ಲಿ ಇಂದು ನಡೆದ ಕಾರ್ಯಾಗಾರವನ್ನು #KPSC ಕಾರ್ಯದರ್ಶಿ ಜ್ಯೋತಿ ಅವರು ಉದ್ಘಾಟಿಸಿ, ಮಾತನಾಡಿದರು. #KEA ED ಹೆಚ್.ಪ್ರಸನ್ನ ಅವರೂ ಈ ಸಂದರ್ಭದಲ್ಲಿ ಮಾತನಾಡಿದರು. #KEA ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು. CM of Karnataka basavaraj rayareddi Dr. Sharan Prakash Patil
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA18,717 次观看 • 2 个月前

#VAO ಹುದ್ದೆಗೆ ನಡೆಯುತ್ತಿರುವ ಪರೀಕ್ಷೆಯನ್ನು #KEA ಕಚೇರಿಯಲ್ಲಿನ ಕಮಾಂಡ್ ಸೆಂಟರ್ ನಲ್ಲಿ ಕುಳಿತು ವೀಕ್ಷಿಸಿದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ. ಪರೀಕ್ಷೆ ಕಾರಣಕ್ಕೆ ವಿವಿಧ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಕೂಡ ಕಮಾಂಡ್ ಸೆಂಟರ್ ಗೆ ಭೇಟಿ ನೀಡಿ ಕೆಲ ಹೊತ್ತು ಇದ್ದು ವೀಕ್ಷಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA37,008 次观看 • 2 年前

#PSI ಪರೀಕ್ಷೆ ಸೆ.22ರಂದು ಬೆಂಗಳೂರು ದಾವಣಗೆರೆ ಧಾರವಾಡ ಕಲಬುರ್ಗಿ ಶಿವಮೊಗ್ಗ ವಿಜಯಪುರ ಜಿಲ್ಲೆಗಳ 164 ಕೇಂದ್ರಗಳಲ್ಲಿ ನಡೆಯಲಿದೆ. 66,990 ಮಂದಿ ಪರೀಕ್ಷೆಗೆ ಅರ್ಹರಿದ್ದಾರೆ. ಬಿಗಿ ಬಂದೋಬಸ್ತ್ ನಲ್ಲಿ ನಡೆಸಲು ಪೊಲೀಸ್ ಇಲಾಖೆ ನೆರವು ಕೋರಲಾಗಿದೆ. KEA ED ಎಚ್.ಪ್ರಸನ್ನ ಈ ಕುರಿತು ಹೇಳಿದ್ದು ವಿಡಿಯೊದಲ್ಲಿದೆ. CM of Karnataka
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA30,576 次观看 • 2 年前

#KSET-23 ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಕೆಇಎ ಇ.ಡಿ ಎಚ್ ಪ್ರಸನ್ನ ಗುರುವಾರ ಮಲ್ಲೇಶ್ವರದ ಕಚೇರಿಯಲ್ಲಿ ಚಾಲನೆ ನೀಡಿದರು. ವಾಣಿಜ್ಯ ಶಾಸ್ತ್ರದ ಅಭ್ಯರ್ಥಿಗಳು ಮೊದಲ ದಿನ ಹಾಜರಿದ್ದರು. ಜು.22ರವರೆಗೆ ದಾಖಲೆ ಪರಿಶೀಲನೆ ಇರುತ್ತೆ. CM of Karnataka Dr MC Sudhakar
ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA14,323 次观看 • 2 年前
没有更多内容可加载