Video wird geladen...

Video konnte nicht geladen werden

Zur Startseite

ಕರ್ನಾಟಕಕ್ಕೆ ಶಿವಾಜಿ ಕೊಡುಗೆ ಏನು ?

16,279 Aufrufe • vor 9 Monaten •via X (Twitter)

0 Kommentare

Keine Kommentare verfügbar

Kommentare vom Original-Post werden hier angezeigt

Ähnliche Videos

ನಿನ್ನೆ ರಾತ್ರಿ ಮಂಗಳೂರಿನಲ್ಲಿ ವಿಜಯ್ ಕುಮಾರ್ ಕೊಡಿಯಾಲ್‌ಬೈಲ್ ಅವರ ನಿರ್ದೇಶನದ ಛತ್ರಪತಿ ಶಿವಾಜಿ ನಾಟಕ ಇತ್ತು. ಅದನ್ನು ನೋಡಬೇಕೆಂದೇ ಒಂದು ದಿನ ಮಂಗಳೂರಿನಲ್ಲಿ ಉಳಿದುಕೊಂಡಿದ್ದೆ. ನಾಟಕ ಅದೆಷ್ಟು ಅದ್ಭುತವಾಗಿ ಮೂಡಿಬಂದಿದೆ ಎಂದರೆ ಶಿವಾಜಿ ಮಹಾರಾಜರ ಇಡಿಯ ಬದುಕನ್ನೇ ಎರಡು ಗಂಟೆಗಳಲ್ಲಿ ಅದ್ದೂರಿಯಾಗಿ ತೆರೆದಿಡುತ್ತದೆ. ಬಹುಶಃ ಶಿವಾಜಿ ಮಹಾರಾಜರ ಬದುಕನ್ನು ರಂಗಕ್ಕೆ ಅಳವಡಿಸಿ ಹೀಗೆ ತರುವ ಪ್ರಯತ್ನ ಕರ್ನಾಟಕದಲ್ಲಿ ಹಿಂದೆಂದೂ ನಡೆದಿರಲಿಲ್ಲ ಎನಿಸುತ್ತದೆ. ಪ್ರತಿ ದೃಶ್ಯದಲ್ಲೂ ನಾಟಕ ರಚನಾಕಾರರು, ನಿರ್ದೇಶಕರು, ಕಲಾವಿದರು ತೋರಿಸಿರುವ ಆಸ್ಥೆಯನ್ನು ಕಂಡಾಗ ರೋಮಾಂಚನವಾಗುವುದು ಸಹಜ. ಕೊನೆಗೆ ಪಟ್ಟಭಿಷಿಕ್ತರಾಗಲು ಶಿವಾಜಿ ಮಹಾರಾಜರು ನಿಜವಾದ ಕುದುರೆಯನ್ನೇ ಏರಿ ಬರುವಾಗಲಂತೂ ನೋಡುಗರು ಕಳೆದೇಹೋಗಿಬಿಡುತ್ತಾರೆ. ಶಿವಾಜಿ ಮಹಾರಾಜರ ಈ ನಾಟಕ ರಾಜ್ಯದ ಮೂಲೆ-ಮೂಲೆಯಲ್ಲೂ ಪ್ರದರ್ಶನಗೊಳ್ಳಬೇಕಿದೆ.

Chakravarty Sulibele

21,400 Aufrufe • vor 1 Jahr

✈️ದಕ್ಷಿಣ ಕರ್ನಾಟಕಕ್ಕೆ ಸಕಲ ಸೌಭಾಗ್ಯಗಳನ್ನು, ಮೂಲಭೂತ ಸೌಕರ್ಯಗಳನ್ನು ನೀಡಿದರೆ ಉತ್ತರ ಕರ್ನಾಟಕದ ಜನತೆ ಏನು ಮಾಡಬೇಕು ಹಾಗೂ ಇಲ್ಲಿನ ಅಭಿವೃದ್ಧಿ ಹೇಗೆ ಸಾಧ್ಯ ಎಂಬುದನ್ನು ಅಧಿವೇಶನದಲ್ಲಿ ಚರ್ಚಿಸಲಾಯಿತು. ✈️ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ನಮ್ಮ ಉತ್ತರ ಕರ್ನಾಟಕದ ಯಾವುದಾದರೂ ಒಂದು ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಮಾಡುವ ಯೋಜನೆಯನ್ನು ಸರ್ಕಾರ ಪ್ರೋತ್ಸಾಹಿಸಬೇಕು ಎಂದು ಒತ್ತಾಯಿಸಿದೆ. ✈️ಇದರಿಂದ ಸ್ಥಳೀಯ ಆರ್ಥಿಕತೆಗೆ ಅನುಕೂಲವಾಗುತ್ತದೆ; ಅಲ್ಲದೆ, ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಕೃಷಿ ಉತ್ಪನ್ನ, ಜವಳಿ, ವ್ಯಾಪಾರ ಹಾಗೂ ವಾಣಿಜ್ಯಕ್ಕೆ ಸಾಕಷ್ಟು ಅನುಕೂಲಕರವಾದ ವಾತಾವರಣ ಸೃಷ್ಟಿಯಾಗುತ್ತದೆ. ✈️ಎಲ್ಲ ಅಭಿವೃದ್ಧಿ ಕಾರ್ಯಗಳನ್ನು, ಯೋಜನೆಗಳನ್ನು ದಕ್ಷಿಣ ಕರ್ನಾಟಕಕ್ಕೆ ಕೊಡದೆ ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ [balanced regional development] ಸರ್ಕಾರ ಒತ್ತು ನೀಡಬೇಕೆಂದು ಒತ್ತಾಯಿಸಿದೆ.

Basanagouda R Patil (Yatnal)

22,687 Aufrufe • vor 1 Jahr

ಡಿಫೆನ್ಸ್ ಕಾರಿಡಾರ್ ನಮ್ಮ ರಾಜ್ಯದ ಹಕ್ಕು! ನಮ್ಮ ರಾಜ್ಯದ #HAL ಘಟಕವನ್ನು ಆಂಧ್ರ ಪ್ರದೇಶಕ್ಕೆ ಸ್ಥಳಾಂತರ ಮಾಡುವಂತೆ ಅಲ್ಲಿನ ಮುಖ್ಯಮಂತ್ರಿಗಳಾದ ಶ್ರೀ ಚಂದ್ರಬಾಬು ನಾಯ್ಡು ಅವರು ಕೇಂದ್ರ ಸರ್ಕಾರಕ್ಕೆ ಕೋರಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಗೊಂದು ವೇಳೆ ಅವರು ಮನವಿ ಮಾಡಿದ್ದರೆ ಅದು ತಪ್ಪು. ರಾಜ್ಯಗಳ ನಡುವಿನ ಸಹಕಾರಕ್ಕೆ ಸೂಕ್ತವಲ್ಲ. ಈ ಬಗ್ಗೆ ನಾವು ಗಂಭೀರವಾಗಿ ಚರ್ಚಿಸುತ್ತೇವೆ. ಏರೋಸ್ಪೇಸ್ ಮತ್ತು ಡಿಫೆನ್ಸ್ ಕಾರಿಡಾರ್ ನಲ್ಲಿ ರಾಷ್ಟ್ರಕ್ಕೆ ನಮ್ಮ ರಾಜ್ಯದ ಕೊಡುಗೆ ಶೇ. 65ರಷ್ಟಿದೆ. ವಿಶ್ವದಲ್ಲೇ ನಮ್ಮ ರಾಜ್ಯ 3ನೇ ಸ್ಥಾನದಲ್ಲಿದೆ. ಇಷ್ಟೊಂದು ಮಹತ್ವದ ಕೊಡುಗೆ ನೀಡಿದರೂ ಡಿಫೆನ್ಸ್ ಕಾರಿಡಾರನ್ನು ಯುಪಿ ಮತ್ತು ತಮಿಳುನಾಡಿಗೆ ಕೇಂದ್ರ ಸರ್ಕಾರ ನೀಡಿದೆ. ಯೋಗ್ಯತೆಯ ಆಧಾರದ ಮೇಲೆ ನಮ್ಮ ರಾಜ್ಯಕ್ಕೇ ನೀಡಬೇಕಿತ್ತು. ಶೀಘ್ರದಲ್ಲೇ ಕೇಂದ್ರ ಸಚಿವರು ಹಾಗೂ ಮಾನ್ಯ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರನ್ನು ಭೇಟಿಮಾಡಿ, ಡಿಫೆನ್ಸ್ ಕಾರಿಡಾರ್ ನಮ್ಮ ರಾಜ್ಯದ ಹಕ್ಕಾಗಿದ್ದು, ಕರ್ನಾಟಕಕ್ಕೆ ಕೊಡುವಂತೆ ಒತ್ತಾಯ ಮಾಡುತ್ತೇನೆ. Rajnath Singh #AerospaceandDefense

M B Patil

21,678 Aufrufe • vor 1 Jahr